Home ತೀರ್ಥಹಳ್ಳಿಅಂಧತ್ವ ಮುಕ್ತ ಶಿವಮೊಗ್ಗ ಕಾರ್ಯಕ್ರಮದಡಿಯಲ್ಲಿ ತೀರ್ಥಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ..!

ಅಂಧತ್ವ ಮುಕ್ತ ಶಿವಮೊಗ್ಗ ಕಾರ್ಯಕ್ರಮದಡಿಯಲ್ಲಿ ತೀರ್ಥಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ..!

by EDITOR NEWS WARRIORS

 

     

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಲೂಕಿನ ವಿವಿಧ ಇಲಾಖೆಗಳು, ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಮತ್ತು ರೋಟರಿ ಕ್ಲಬ್ ಗಳ ಸಹಕಾರದಲ್ಲಿ ಅಂಧತ್ವ ಮುಕ್ತ ಶಿವಮೊಗ್ಗ ಕಾರ್ಯಕ್ರಮದಡಿಯಲ್ಲಿ ತೀರ್ಥಹಳ್ಳಿಯ ಶಾಂತವೇರಿ ಗೋಪಾಲ ಗೌಡ ರಂಗ ಮಂದಿರದಲ್ಲಿ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಟ್ಟಣ ಪಂಚಾಯತ್ ಅಧ್ಯಕ್ಷ ರಹಮತ್ತುಲ್ಲ ಅಸಾದಿ, ದೃಷ್ಟಿ ದೋಷ ಪತ್ತೆ ಹಚ್ಚಿ ಕನ್ನಡಕಗಳ ಅಗತ್ಯ ಇರುವವರಿಗೆ ಉಚಿತ ಕನ್ನಡಗಳನ್ನು ನೀಡುವುದರ ಜೊತೆಗೆ ಹೆಚ್ಚಿನ ಚಿಕಿತ್ಸೆಯು ಇರುವವರಿಗೆ ಉನ್ನತ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಈ ಯೋಜನೆ ಅತ್ಯಂತ ಮಾದರಿಯಾದದ್ದು ಎಂದರು. ಮುಂದುವರೆದು ಜನರಿಗೆ ಹೆಚ್ಚಿನ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಪಟ್ಟಣ ಪಂಚಾಯಿತಿಯೂ ಹಲವು ಯೋಜನೆಗಳು ಹಮ್ಮಿಕೊಂಡಿದ್ದು ಅವರನ್ನು ಕಾರ್ಯಗತಗೊಳಿಸಲಾಯಿತು.

     ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅನಿಕೇತನ್, ಈ ಕಾರ್ಯಕ್ರಮ ದೇಶದಲ್ಲೇ ಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಅನುಷ್ಟಾನಗೊಂಡಿದ್ದು. ಮೂವತ್ತು ವರ್ಷ ಮೇಲ್ಪಟ್ಟ ಎಲ್ಲರನ್ನೂ ತಪಾಸಣೆಗೊಳಪಡಿಸಿ ಅಗತ್ಯ ಅಗತ್ಯಕ್ಕಾಗಿ ನೀಡಲಾಗುವುದು. ಬಹಳ ಮುಖ್ಯವಾಗಿ ದುಬಾರಿ ಚಿಕಿತ್ಸೆಗಳಾದ ಡಯಾಬಿಟೀಸ್ ರೆಟಿನೋಪತಿ, ಗ್ಲುಕೋಮ ಸಮಸ್ಯೆಗಳಿಗೆ ಈ ಕಾರ್ಯಕ್ರಮದಡಿಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಮೊದಲ ಹಂತದಲ್ಲಿ ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿ ಕಣ್ಣಿನ ಸಮಸ್ಯೆಗಳನ್ನು ಪತ್ತೆ ಹಚ್ಚಿ ದ್ವಿತೀಯ ತಪಾಸಣೆಗೆ ಶಿಫಾರಸು ಮಾಡುತ್ತಾರೆ. ಅಲ್ಲಿಯೂ ಹೆಚ್ಚಿನ ಚಿಕಿತ್ಸೆಗೆ ಉನ್ನತ ಆಸ್ಪತ್ರೆಯ ಸರ್ಕಾರಿ, ಖಾಸಗಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳು, ಪಟ್ಟಣ ಪಂಚಾಯತ್, ಲಯನ್ಸ್, ರೋಟರಿ ಸಂಸ್ಥೆಗಳು ಉತ್ತಮ ಸಹಕಾರದೊಂದಿಗೆ ಅವರೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಲಾಗಿದೆ. ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಭಟ್, ರೋಟರಿ ಕ್ಲಬ್ ಅಧ್ಯಕ್ಷ ಭರತ್ ಅತಿಥಿಗಳಾಗಿದ್ದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಆರೋಗ್ಯ ಇಲಾಖಾ ಸಿಬ್ಬಂದಿಗಳು, ವೈದ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ ಟಿ ವಿ ಸ್ವಾಗತಿಸಿ, ನಿರೂಪಿಸಿದರು. ಬಿ ಪಿಎಂ ಗಿರಿ ಡಿ ಟಿ ಟಿ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!