Home ರಾಜ್ಯಮತಾಂತರ ನಿಷೇಧ ಕಾಯ್ದೆ ಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನಾಳೆ ನಿಷೇಧ ಮಸೂದೆ ಮಂಡನೆ..! ಕರಡು ವಿಧೇಯಕದಲ್ಲಿ ಕೆಲವು ಬದಲಾವಣೆಗಳು..! ಪ್ರಸ್ತಾಪಿಸಲಾಗಿರುವ ಅಂಶಗಳೇನು?

ಮತಾಂತರ ನಿಷೇಧ ಕಾಯ್ದೆ ಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನಾಳೆ ನಿಷೇಧ ಮಸೂದೆ ಮಂಡನೆ..! ಕರಡು ವಿಧೇಯಕದಲ್ಲಿ ಕೆಲವು ಬದಲಾವಣೆಗಳು..! ಪ್ರಸ್ತಾಪಿಸಲಾಗಿರುವ ಅಂಶಗಳೇನು?

by EDITOR NEWS WARRIORS

ಬೆಳಗಾವಿ: ದಿನೇದಿನೇ ಕುತೂಹಲ ಕೆರಳಿಸಿದ್ದ ರಾಜ್ಯಾಧ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.

ಕರಡು ವಿಧೇಯಕದಲ್ಲಿ ಕೆಲವು ಬದಲಾವಣೆಗಳು:

ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಯಾಗಲಿದೆ. ಕರಡು ವಿಧೇಯಕದಲ್ಲಿನ ಕೆಲವು ಬದಲಾವಣೆಗಳೊಂದಿಗೆ ನಾಳೆ ಸದನದಲ್ಲಿ ಮಂಡನೆಯಾಗಲಿದೆ. ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಅನುಮೋದನೆ ನೀಡಿದೆ. ನಾಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗಲಿದೆ.

ಕರಡು ವಿಧೇಯಕದಲ್ಲಿನ ಬದಲಾವಣೆಯಾದ ಮತಾಂತರ ನಿಷೇಧ ಮಸೂದೆಯಲ್ಲಿ ಅಂಶಗಳು:


1) ಬಲವಂತದ ಮತಾಂತರ ಶಿಕ್ಷಾರ್ಹ ಎಂಬ ಪ್ರಕಾರವೇ ವಿಧೇಯಕ ಸಿದ್ಧತಾ ಹಂತದಲ್ಲಿದೆ
2) ಯಾವುದೇ ವ್ಯಕ್ತಿ ಅಥವಾ ಸಮುದಾಯದ ಬಲವಂತದ ಮತಾಂತರ ಮಾಡುವಂತಿಲ್ಲ
3) ವ್ಯಕ್ತಿ ಮತಾಂತರ ಹೊಂದಬೇಕಾದರೆ ಸಕ್ಷಮ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು
4) ಮತಾಂತರ ಪ್ರಕ್ರಿಯೆ ನಡೆಸಬೇಕಾದರೂ ಸಕ್ಷಮ‌ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು
5) ಅರ್ಜಿ ಸಲ್ಲಿಸಿದ ವ್ಯಕ್ತಿ ತನ್ನ ಇಚ್ಛೆಗೆ ಅನುಗುಣವಾಗಿ ನೀಡಿರುವ ಅರ್ಜಿ ಹಿಂಪಡೆಯಲು ಸ್ವತಂತ್ರ
6) ಮತಾಂತರ ಆಗಲು ಬಯಸುವ ವ್ಯಕ್ತಿಯ ಖಾಸಗಿತನ ಕಾಪಾಡಲು ಮತ್ತು ಧಾರ್ಮಿಕ ಹಕ್ಕನ್ನು ಕಾಪಾಡಲು ಮತಾಂತರ ಪ್ರಕ್ರಿಯೆ ಗೌಪ್ಯವಾಗಿಡುವಂತಿಲ್ಲ
7) ಮತಾಂತರ ಪ್ರಕ್ರಿಯೆಯೊಳಗೆ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ತೊಡಗುವಂತೆ ಮಾಡಲು ಅವಕಾಶವಿಲ್ಲ
8) ಬಲವಂತದ ಮತಾಂತರ ಮಾಡುವ ಅಥವಾ ಮತಾಂತರಕ್ಕೆ ಪ್ರಚೋದನೆ ನೀಡುವ ವ್ಯಕ್ತಿಯನ್ನು ಬಂಧಿಸಲು ಅವಕಾಶ
9) ಬಂಧಿತನಾಗುವ ವ್ಯಕ್ತಿಗೆ ಜಾಮೀನು ಪಡೆಯಲು ಅವಕಾಶ ಇಲ್ಲದಂತೆ, ಜಾಮೀನುರಹಿತ ಎಂದು ಪರಿಗಣಿಸುವುದು
10) ಮತಾಂತರ ಪ್ರಕ್ರಿಯೆ ಯಾವುದೇ ಧಾರ್ಮಿಕ ಕಟ್ಟಡಗಳು, ಪ್ರಾರ್ಥನಾ ಕೇಂದ್ರಗಳಲ್ಲಿ ಮಾಡುವಂತಿಲ್ಲ
11) ಮತಾಂತರ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆಯುತ್ತಿದ್ದಲ್ಲಿ ನಿಗದಿತ ಪ್ರಕ್ರಿಯೆಯನ್ನು ತಟಸ್ಥ ಪ್ರದೇಶದಲ್ಲಿ ಮಾಡುವುದು ಕಡ್ಡಾಯ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!