Home ಶಿವಮೊಗ್ಗಆರೋಗ್ಯದಿನೇ ದಿನೇ ಕೋರೋಣ ಹೆಚ್ಚಳ ನಾಳೆಯಿಂದ ಟಪ್ ರೂಲ್ಸ್ ಜಾರಿ ಗೃಹ ಸಚಿವ ಆರಗ ಜ್ಞಾನೇಂದ್ರ ಘೋಷಣೆ…!

ದಿನೇ ದಿನೇ ಕೋರೋಣ ಹೆಚ್ಚಳ ನಾಳೆಯಿಂದ ಟಪ್ ರೂಲ್ಸ್ ಜಾರಿ ಗೃಹ ಸಚಿವ ಆರಗ ಜ್ಞಾನೇಂದ್ರ ಘೋಷಣೆ…!

by EDITOR NEWS WARRIORS

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದ್ದು ಅದರ ನಿಯಂತ್ರಣಕ್ಕಾಗಿ ಸರ್ಕಾರ ನಾಳೆಯಿಂದ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಇದರ ಬಗ್ಗೆ ಮಹತ್ವದ ಮಾಹಿತಿ ನೀಡಿದರು.

ಕೋವಿಡ್ ಟೆಸ್ಟ್ ಪ್ರಮಾಣ ಹೆಚ್ಚಿಸಲಾಗುವುದು:

ರಾಜ್ಯಾದ್ಯಂತ ಕೋವಿಡ್ ಟೆಸ್ಟ್ ಹೆಚ್ಚಿಸಲಾಗುವುದು ಪ್ರತಿದಿನ ಈಗಿರುವ 1 ಲಕ್ಷದ 10 ಸಾವಿರ ಟೆಸ್ಟಿಂಗ್ ಸಂಖ್ಯೆಯನ್ನು 1 ಲಕ್ಷದ 50 ಸಾವಿರಕ್ಕೆ ಹೆಚ್ಚಿಸಲಾಗುವುದು.


ಮಾಸ್ಕ್, ದೈಹಿಕ, ಸಾಮಾಜಿಕ ಅಂತರ ಕಡ್ಡಾಯ ಪಾಲನೆಗೆ ಸೂಚಿಸಲಾಗಿದೆ ಎಂದರು.

ಶಾಲೆ ಬಂದ್ ಮಾಡುವ ವಿಚಾರದಲ್ಲಿ ತಾಲೂಕು ಮಟ್ಟದಲ್ಲಿ ನಿರ್ಧಾರ:

ಶಾಲೆಗಳಲ್ಲಿ, ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹರಡುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುವುದು. ಶಾಲೆಗಳನ್ನು ಬಂದ್ ಮಾಡುವುದು ಅಥವಾ ರಜೆ ನೀಡುವ ಬಗ್ಗೆ ತಾಲುಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು:

  • ಕೋವಿಡ್ ಟೆಸ್ಟಿಂಗ್ ಹೆಚ್ಚಳ
  • ಮಾಸ್ಕ್, ದೈಹಿಕ ಅಂತರ, ಸಾಮಾಜಿಕ ಅಂತರ ಪಾಲನೆ ಕಡ್ಡಾಯ
  • ವಿಶೇಷವಾಗಿ ಮಕ್ಕಳ ಬಗ್ಗೆ ಹೆಚ್ಚಿನ ನಿಗಾ
  • ಬೂಸ್ಟರ್ ಡೋಸ್ ವೇಗ ಹೆಚ್ಚಳಕ್ಕೆ ಸೂಚನೆ
  • ಹೋಂ ಐಸೋಲೇಷನ್ ನಲ್ಲಿರುವವರ ಬಗ್ಗೆ ನಿಗಾ
  • ಜನಸಂದಣಿಯಾಗದಂತೆ ಕ್ರಮ
  • ಜನ ಗುಂಪು ಸೇರದಂತೆ ಹಬ್ಬ ಆಚರಣೆಗೆ ಸೂಚನೆ
  • ದೇವಸ್ಥಾನಗಳಲ್ಲಿ ಈಗಿರುವ ನಿಯಮ ಕಡ್ಡಾಯ ಪಾಲನೆ, ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲು
  • ಐಟಿ-ಬಿಟಿ ಕಚೇರಿ ಓಪನ್ ಬಗ್ಗೆ ಯಥಾಸ್ಥಿತಿ ಮುಂದುವರಿಕೆ
  • ಹೋಟೆಲ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಈಗಿರುವ ಯಥಾಸ್ಥಿತಿ ಮುಂದುವರಿಕೆ
  • ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜು, ಹಾಸ್ಟೇಲ್ ಬಂದ್ ಬಗ್ಗೆ ಶಿಕ್ಷಣ ಸಂಸ್ಥೆ ಹಾಗೂ ಜಿಲ್ಲಾಡಳಿತದ ನಿರ್ಧಾರಕ್ಕೆ ಬಿಟ್ಟದ್ದು
  • ಮಕ್ಕಳಿಗಾಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್, ಬೆಡ್ ಮೀಸಲು
  • ಮಾರ್ಕೆಟ್ ಗಳಲ್ಲಿ ಜನಸಂದಣಿಯಾಗದಂತೆ ಕ್ರಮ, ಮಾರ್ಕೆಟ್ ಸ್ಥಳಾಂತರಕ್ಕೆ ವ್ಯವಸ್ಥೆ

ನಾಳೆಯಿಂದಲೇ ರಾಜ್ಯಾದ್ಯಂತ ಈ ನಿಯಮ ಜಾರಿಗೆ ಬರಲಿದ್ದು, ಇನ್ನಷ್ಟು ಕಠಿಣ ನಿಯಮಗಳ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಕೋವಿಡ್ ಸ್ಥಿತಿಗತಿ ನೋಡಿಕೊಂಡು ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ತಿಳಿಸಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!