Home ರಾಜ್ಯಅಡಿಕೆ ಬೇರು ಹುಳುವಿನ ಬಾಧೆಗೆ ಹತೋಟಿ ಕ್ರಮಗಳು!!

ಅಡಿಕೆ ಬೇರು ಹುಳುವಿನ ಬಾಧೆಗೆ ಹತೋಟಿ ಕ್ರಮಗಳು!!

by EDITOR NEWS WARRIORS

ಶಿವಮೊಗ್ಗ>ಜುಲೈ> 16 >ಬೇರು ಹುಳುಗಳು ಅಡಿಕೆ ಕೃಷಿ ಪರಿಸರದಲ್ಲಿನ ದೀರ್ಘಕಾಲಿಕ ಕೀಟಗಳಾಗಿದ್ದು, ರೈತರಿಗೆ ಇವುಗಳ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ಡಾ. ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ಈ ಕೆಳಗಿನಂತೆ ನೀಡಿರುತ್ತಾರೆ.ಬೇರು ಹುಳುಗಳು ತೇವಾಂಶವಿರುವ ಮಣ್ಣಿನ ಪದರದಲಿ,್ಲ ಗೋಡು ಮಣ್ಣಿನಿಂದ ಕೂಡಿದ ಹಳ್ಳದ ಪಕ್ಕದ ಮತ್ತು ಗದ್ದೆ ಜಮೀನಿನಲ್ಲಿ ಮಾಡಿದ ಅಡಿಕೆ ತೋಟಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಹುಳುಗಳು ಭೂಮಿಯೊಳಗಿದ್ದು, ಅಡಿಕೆ ಬೇರುಗಳನ್ನು ಕತ್ತರಿಸಿ ತಿನ್ನುವುದರಿಂದ ಗಿಡಗಳು ರೋಗಗ್ರಸ್ಥವಾದಂತೆ ಕಂಡುಬರುತ್ತವೆ. ಬಾಧೆಗೀಡಾದ ಮರಗಳಲ್ಲಿ ಎಲೆಗಳು ಹಳದಿಯಾಗಿ ಗರಿ ಮತ್ತು ಗೆಣ್ಣುಗಳು ಗಿಡ್ಡವಾಗಿ ಕಾಂಡದ ತುದಿ ಮೊನಚಾಗುತ್ತದೆ. ಇಳುವರಿ ಕಡಿಮೆಯಾಗುತ್ತಾ ನಂತರದ ದಿನಗಳಲ್ಲಿ ಮರಗಳು ಸಾಯುತ್ತವೆ. ಹತೋಟಿ ಕ್ರಮಗಳು • ಮುಂಗಾರಿನಲ್ಲಿ ಒಂದೆರಡು ಹದ ಮಳೆ ಆದ ನಂತರ ಮುಸ್ಸಂಜೆಯಲ್ಲಿ ಭೂಮಿಯಿಂದ ಹೊರಬರುವ ದುಂಬಿಗಳನ್ನು ಹಿಡಿದು ನಾಶಪಡಿಸುವುದರಿಂದ ಸಂತತಿಯನ್ನು ಕಡಿಮೆ ಮಾಡಬಹುದು. • ಆಗಸ್ಟ್ ಮೊದಲನೆ ವಾರದಲ್ಲಿ 2-3 ನೇ ಹಂತದ ಬೇರು ಹುಳುಗಳು ಹೆಚ್ಚಾಗಿರುವಾಗ ಕ್ಲೋರೋಪೈರಿಫಾಸ್ 20 ಇ.ಸಿಯನ್ನು ಎಕರೆಗೆ 2 ಲೀ ನಂತೆ (200 ಲೀಟರ್ ನೀರಿಗೆ 400 ಮಿ.ಲಿ ಔಷಧಿ ಕರಗಿಸಿ) ಪ್ರತಿ ಮರಕ್ಕೆ 3-5 ಲೀ ಪ್ರಮಾಣದಲ್ಲಿ ಮರದ ಸುತ್ತ ಸುರಿಯಬೇಕು. • ಸೆಪ್ಟೆಂಬರ್ ತಿಂಗಳಲ್ಲಿ ಸಾಧ್ಯವಿರುವ ಕಡೆ ಬಸಿಗಾಲುವೆಗಳಲ್ಲಿ 3-4 ದಿನ ಕಂಠ ಮಟ್ಟ ನೀರು ನಿಲ್ಲಿಸಿದರೆ ಹುಳುಗಳು ಭೂಮಿಯ ಮೇಲ್ಪದರಕ್ಕೆ ಬರುತ್ತದೆ. ಬಸಿಗಾಲುವೆಗಳ ಮಧ್ಯದ ಪಟದಲ್ಲಿ ಅಗತೆ ಮಾಡಿ ಹುಳುಗಳನ್ನು ಹೆಕ್ಕಿ ನಾಶಪಡಿಸಬೇಕು. ನಂತರ ಇದೇ ತಿಂಗಳ ಮೂರನೇ ವಾರದಲ್ಲಿ ಕ್ಲೋರೋಫೈರಿಪಾಸ್ 20 ಇ.ಸಿಯನ್ನು ಎಕರೆಗೆ 2 ಲೀ (200 ಲೀಟರ್ ನೀರಿಗೆ 400 ಮಿ.ಲಿ ಔಷಧಿ ಕರಗಿಸಿ) ದ್ರಾವಣ ಅಥಾವ ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ ಅನ್ನು ಎಕರೆಗೆ 700 ಮಿ.ಲೀ ಪ್ರಮಾಣದಲ್ಲಿ (200 ಲೀಟರ್ ನೀರಿಗೆ 200 ಮಿ.ಲಿ ಔಷಧಿ ಕರಗಿಸಿ) ಪ್ರತಿ ಮರಕ್ಕೆ 3-5 ಲೀಟರ್ ನಂತೆ ದ್ರಾವಣ ರೂಪದಲ್ಲಿ ಸೇರಿಸಬೇಕು. • ಮೆಟಾರೈಜಿಯಂ ಅನಿಸೋಪ್ಲಿಯೆ ಅಥವಾ ಹೆಟರೋರಾಬ್ಟಿಸ್ 20 ಗ್ರಾಂ ಪುಡಿಯನ್ನು 1 ಲೀ ನೀರಿನಲ್ಲಿ ಬೆರೆಸಿ ಗಿಡದ ಬುಡ ಭಾಗಕ್ಕೆ ಹಾಕಬೇಕು ಹಾಗೆಯೇ ಮರವೊಂದಕ್ಕೆ 250 ಗ್ರಾಂ ಬೇವಿನ ಹಿಂಡಿ ಹಾಕಬೇಕು.ಇದಲ್ಲದೆ ತೋಟಗಳಿಗೆ ಕಲ್ಲುಗೊಚ್ಚು ಮಣ್ಣನ್ನು ಲಭ್ಯವಿರುವೆಡೆ ಹಾಕಬೇಕು. ಬೇರುಹುಳುಗಳ ಸಂಪೂರ್ಣ ನಿಯಂತ್ರಣ ಕಷ್ಟ ಸಾಧ್ಯವಾದರೂ ಸಮಗ್ರ ಹತೋಟಿ ಕ್ರಮಗಳನ್ನು 3-4 ವರ್ಷ ನಿರಂತರವಾಗಿ ಅನುಸರಿಸಿದರೆ ಹಾನಿಯನ್ನು ಕಡಿಮೆ ಮಾಡಿ ಇಳುವರಿ ಹೆಚ್ಚಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ..(ರಘುರಾಜ್ ಹೆಚ್, ಕೆ)…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!