Home ಶಿವಮೊಗ್ಗಎಸಿಬಿ ದಾಳಿಗೆ ಎಚ್ಛೇತ್ತ ಶಿವಮೊಗ್ಗ ತಾಲ್ಲೂಕು ಅರೋಗ್ಯಧಿಕಾರಿ – ಹಲವು ತಿಂಗಳಿಂದ ಪಾರದರ್ಶಕವಾಗಿ ಎಫ್. ಎಸ್. ಎ. ಐ. ನೋಂದಣಿ ಅರ್ಜಿಗಳನ್ನೂ ವಿಲೇ ಮಾಡದೇ ಸತಾಯಿಸುತ್ತಿರುವ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳಿಂದ ಚಾಟಿ..!!

ಎಸಿಬಿ ದಾಳಿಗೆ ಎಚ್ಛೇತ್ತ ಶಿವಮೊಗ್ಗ ತಾಲ್ಲೂಕು ಅರೋಗ್ಯಧಿಕಾರಿ – ಹಲವು ತಿಂಗಳಿಂದ ಪಾರದರ್ಶಕವಾಗಿ ಎಫ್. ಎಸ್. ಎ. ಐ. ನೋಂದಣಿ ಅರ್ಜಿಗಳನ್ನೂ ವಿಲೇ ಮಾಡದೇ ಸತಾಯಿಸುತ್ತಿರುವ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳಿಂದ ಚಾಟಿ..!!

by EDITOR NEWS WARRIORS

ಶಿವಮೊಗ್ಗ:- ಇತ್ತೀಚಿನ ಎಸಿಬಿ ದಾಳಿ ಹಲವು ತಿಂಗಳಿನಿಂದ ಬಾಕಿ ಉಳಿದಿದ್ದ ಅರ್ಜಿಗಳನ್ನೆಲ್ಲ ವಿಲೇವಾರಿ ಮಾಡಿಸಿದೆ. ಇಂತದ್ದೊಂದು ಘಟನೆ ಶಿವಮೊಗ್ಗದ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಕಾಯಿದೆ ಕಚೇರಿಯಲ್ಲಿ ನಡೆದಿದೆ.

ದಿನಸಿ ಅಂಗಡಿ ನೋಂದಣಿಗೆ ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದರು. ಅರ್ಜಿ ವಿಲೇವಾರಿಗೆ ಅಲ್ಲಿನ ಎಫ್‌ಡಿಎ 2ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 1 ಸಾವಿರ ಕೊಡುವಾಗ ಜೂನ್1ರಂದು ರೆಡ್‌ಹ್ಯಾಂಡ್ ಆಗಿ ಆರೋಪಿಯನ್ನು ಬಂಧಿಸಲಾಯಿತು. ನಂತರ ಅಧಿಕಾರಿ, ನೌಕರರಿಗೆ ಎಚ್ಚರಿಕೆ ನೀಡಲಾಗಿತ್ತು.

ಇದರ ಪರಿಣಾಮ ಮೂರು ದಿನದಲ್ಲಿ ಶಿವಮೊಗ್ಗ ತಾಲ್ಲೂಕು ಕಚೇರಿಯ 196 ಹಾಗೂ ಜಿಲ್ಲಾ ಕಚೇರಿಯ 93 ಅರ್ಜಿಗಳು ಸೇರಿ 289 ಅರ್ಜಿಗಳು ವಿಲೇವಾರಿಯಾಗಿದ್ದು ಯಾವುದೇ ಅರ್ಜಿಗಳು ಬಾಕಿ ಇಲ್ಲ ಎಂದು ಅಧಿಕಾರಿಗಳು ಷರಾ ಬರೆದಿದ್ದಾರೆ.

ಶಿವಮೊಗ್ಗ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಭ್ರಷ್ಟ ಅಧಿಕಾರಿಗಳ ಸಿಂಹಸ್ವಪ್ನರಾದ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಲೋಕೇಶ್ ಹಾಗೂ ಅವರ ಭ್ರಷ್ಟಾಚಾರ ನಿಗ್ರಹ ದಳದ ಕರ್ತವ್ಯ ನಿರತ ತಂಡದ ಪ್ರಾಮಾಣಿಕ ಕರ್ತವ್ಯ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಭ್ರಷ್ಟರ ವಿರುದ್ಧ ನಿರಂತರ ದಾಳಿಯತ್ತ ಶಿವಮೊಗ್ಗ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪ್ರಾಮಾಣಿಕ ದಾಳಿಗೆ ಭ್ರಷ್ಟರ ವಿರುದ್ಧದ ಸಮರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು: 9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!