Home ಶಿವಮೊಗ್ಗಆರೋಗ್ಯಮಾದಕ ದ್ರವ್ಯ ಸೇವನೆ ವ್ಯಸನದ ವಿರುದ್ಧ ಸಂಘಟಿತ ಹೋರಾಟ ಅಗತ್ಯ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಅಭಿಮತ..!!

ಮಾದಕ ದ್ರವ್ಯ ಸೇವನೆ ವ್ಯಸನದ ವಿರುದ್ಧ ಸಂಘಟಿತ ಹೋರಾಟ ಅಗತ್ಯ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಅಭಿಮತ..!!

by EDITOR NEWS WARRIORS

ಶಿವಮೊಗ್ಗ: ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ಹಾಗೂ ಕಳ್ಳ ಸಾಗಾಣಿಕೆ ವಿರುಧ್ದ ರಾಜ್ಯ ಸರಕಾರ ಕಠಿಣ ಕ್ರಮ ಜರುಗಿಸುತ್ತಿದ್ದು, ಅಭಿಯಾನದ ರೂಪದಲ್ಲಿ ಪಿಡುಗಿನ ವಿರುದ್ಧ ಹೋರಾಟ ನಡೆಸಲು, ಸಮಾಜದ ಎಲ್ಲಾ ವರ್ಗದ ಜನತೆ, ಕೈ ಜೋಡಿಸಬೇಕು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಳೆದ ವರ್ಷ ಸುಮಾರು 8505 ಮೊಕದ್ದಮೆ ಗಳನ್ನು ದಾಖಲಿಸಿ, ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ದ್ರವ್ಯ ವಸ್ತುಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದರು.

ಕಳೆದ 12 ತಿಂಗಳ ಅವಧಿಯಲ್ಲಿ ಒಟ್ಟು 7846 ಮಂದಿಯನ್ನು ಬಂಧಿಸಲಾಗಿದೆ ಎಂದೂ ತಿಳಿಸಿದ ಸಚಿವರು, ವಶಪಡಿಸಿಕೊಳ್ಳಲಾದ ಮಾದಕ ದ್ರವ್ಯ ಸರಕನ್ನು, ನ್ಯಾಯಾಲಯ ದಿಂದ ಅನುಮತಿ ಪಡೆದು, ನಾಶ ಪಡಿಸಲಾಗುವುದು ಎಂದರು.

ದೇಶದೊಳಕ್ಕೆ ಮಾದಕ ದ್ರವ್ಯ ವಸ್ತುಗಳನ್ನು ಅಕ್ರಮವಾಗಿ ಸಾಗಿಸಿ, ದೇಶದ ಯುವ ಜನತೆಯನ್ನು ಗುರಿ ಮಾಡಿಕೊಂಡು, ಸಮಾಜವನ್ನು ದುರ್ಬಲ ಗೊಳಿಸುವ ಹುನ್ನಾರ ಇದೆ, ಎಂದು ಎಚ್ಚರಿಸಿದ ಗೃಹ ಸಚಿವರು, ರಾಜ್ಯ ಗೃಹ ಇಲಾಖೆ ಮಾದಕ ವಸ್ತುಗಳ ವಿರುಧ್ದ ಜನ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದರು.

ರಘುರಾಜ್ ಹೆಚ್. ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!