Home ರಾಜ್ಯಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಜಿಲ್ಲಾಡಳಿದೊಂದಿಗೆ ಸಹಕರಿಸಿ..!! ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಂದ ಸಾರ್ವಜನಿಕರಲ್ಲಿ ಮನವಿ..!!

ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಜಿಲ್ಲಾಡಳಿದೊಂದಿಗೆ ಸಹಕರಿಸಿ..!! ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಂದ ಸಾರ್ವಜನಿಕರಲ್ಲಿ ಮನವಿ..!!

by EDITOR NEWS WARRIORS

ಶಿವಮೊಗ್ಗ, : ನಗರದಲ್ಲಿ ನಿರಂತರ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದರು.

ಇತ್ತೀಚಿಗೆ ನಗರದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಸಮಸ್ಯೆಗಳು ಎದುರಾದರೂ ಅದನ್ನು ತಕ್ಷಣ ಬಗೆಹರಿಸಲು ಜಿಲ್ಲಾಡಳಿತ ಸದಾ ಸಿದ್ಧವಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪೊಲೀಸರೊಂದಿಗೆ ಸಹಕರಿಸಬೇಕು. ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಬರುವುದು ಸಹಜ. ಅಂತಹ ಸಂದರ್ಭಗಳಲ್ಲಿ ಸಮುದಾಯದ ನಾಯಕರು ಯುವಕರಿಗೆ ಬುದ್ಧಿ ಹೇಳಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಬೇಕು. ಅಹಿತರಕರ ಘಟನೆಗಳಿಂದ ಅಮಾಯಕರಿಗೆ ತೊಂದರೆಯಾಗುತ್ತಿದ್ದು, ವ್ಯಾಪಾರಿಗಳು ಸಂಕಷ್ಟ ಅನುಭವಿಸುವ ಪರಿಸ್ಥಿತಿ ಇದೆ. ಇದಕ್ಕೆ ಯಾರೂ ಅವಕಾಶ ಕಲ್ಪಿಸಬಾರದು ಎಂದು ಹೇಳಿದರು.

ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಮಾತನಾಡಿ, ಶಿವಮೊಗ್ಗದಲ್ಲಿ ಗಾಂಜಾ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಬಹುತೇಕ ಕಡಿವಾಣ ಹಾಕಲಾಗಿದೆ. ಇದಕ್ಕೆ ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಅತಿ ಅಗತ್ಯ. ಮಕ್ಕಳು ಹಣ ವೆಚ್ಚ ಮಾಡುವುದರ ಬಗ್ಗೆ ಪಾಲಕರು ನಿಗಾ ಇರಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ಕುರಿತು ಸ್ಥಳೀಯ ಸಂಸ್ಥೆಗಳು ಮುತುವರ್ಜಿ ವಹಿಸಬೇಕು. ಸ್ಮಾರ್ಟ್ ಸಿಟಿ ವತಿಯಿಂದ ಶಿವಮೊಗ್ಗ ನಗರದಲ್ಲಿ 135 ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ವಾರ್ಡ್‍ವಾರು ಶಾಂತಿ ಸಭೆಯನ್ನು ನಿಯಮಿತವಾಗಿ ನಡೆಸಲು ಸೂಚನೆಗಳನ್ನು ಈಗಾಗಲೇ ನೀಡಲಾಗಿದೆ ಎಂದು ಹೇಳಿದರು.

ಐಜಿಪಿ ಕೆ.ತ್ಯಾಗರಾಜನ್ ಅವರು ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಡುವವರ ವಿರುದ್ಧ ನಿಗಾ ಇರಿಸಲಾಗಿದೆ. ಅಧಿಕೃತವಲ್ಲದ ಯಾವುದೇ ಸುದ್ದಿಯನ್ನು ಜಾಲತಾಣಗಳಲ್ಲಿ ಕಳುಹಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕುರಿತು ವಿವಿಧ ಸಮುದಾಯಗಳ ನಾಯಕರು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಗಣೇಶೋತ್ಸವಕ್ಕೆ ಯಾವುದೇ ಭಂಗವಾಗದಂತೆ ಎಚ್ಚರಿಕೆ ವಹಿಸಬೇಕು. ಗಾಂಜಾ ಚಟುವಟಿಕೆಗಳನ್ನು ನಿಯಂತ್ರಿಸಿದರೆ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ಪ್ರಚೋದನೆ ಮಾಡುವವರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಅನಧಿಕೃತ ಫ್ಲೆಕ್ಸ್ ಅಳವಡಿಸುವುದನ್ನು ನಿಯಂತ್ರಿಸಬೇಕು ಎಂದು ಹಲವು ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ರಘುರಾಜ್ ಹೆಚ್.ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!