Home ರಾಜ್ಯ“ನನ್ನ ಪಾಲಿಸಿ ನನ್ನ ಕೈಯಲ್ಲಿ ” ಜಿಲ್ಲಾಧಿಕಾರಿಗಳಿಂದ ವಿಮಾ ಪಾಲಿಸಿ ವಿತರಣೆ..!!!!

“ನನ್ನ ಪಾಲಿಸಿ ನನ್ನ ಕೈಯಲ್ಲಿ ” ಜಿಲ್ಲಾಧಿಕಾರಿಗಳಿಂದ ವಿಮಾ ಪಾಲಿಸಿ ವಿತರಣೆ..!!!!

by EDITOR NEWS WARRIORS


ಶಿವಮೊಗ್ಗ: ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ಅಂಗವಾಗಿ ರೈತರ ಮನೆ ಬಾಗಿಲಿಗೆ ಬೆಳೆ ವಿಮೆ ಪಾಲಿಸಿ ವಿತರಿಸುವ ‘ನನ್ನ ಪಾಲಿಸಿ ನನ್ನ ಕೈಯಲ್ಲಿ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 1 ರಿಂದ 27 ರವರೆಗೆ ಹಮ್ಮಿಕೊಳ್ಳಲಾಗಿದ್ದು ಇದರ ಅಂಗವಾಗಿ ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಪಾಲಿಸಿಗಳನ್ನು ವಿತರಿಸಿದರು.


ಜಿಲ್ಲಾಧಿಕಾರಿಗಳು 05 ಜನ ರೈತರಿಗೆ ಸಾಂಕೇತಿಕವಾಗಿ ವಿಮಾ ಪಾಲಿಸಿಯನ್ನು ವಿತರಿಸಿ, ಮುಂಬರುವ ಮುಂಗಾರು ಹಂಗಾಮಿನಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಈ ಯೋಜನೆಯಡಿ ಭಾಗಿಯಾಗುವಂತೆ ತಿಳಿಸಿದರು.
ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ವಿಮಾ ಭದ್ರತೆ ಕವಚ ಒದಗಿಸುವುದು ಸರ್ಕಾರದ ಸಂಕಲ್ಪವಾಗಿದ್ದು, ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರುವುದು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ. ಈ ವಿಮಾ ಪಾಲಿಸಿಯನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ಬೆಳೆ ವಿಮಾ ಪಾಲಿಸಿ ವಿತರಣಾ ಕಾರ್ಯಕ್ರಮ ಪ್ರಾರಂಭಿಸಲಾಗಿದೆ.


ಸಾಲ ಪಡೆಯದ ರೈತರು ವಿಮಾ ಅರ್ಜಿ ಸಲ್ಲಿಸಿದ ವೇಳೆ ಸ್ವೀಕೃತಿ ಪಡೆದು ನೇರವಾಗಿ ವಿಮೆ ಪಾಲಿಸಿ ಪಡೆದುಕೊಳ್ಳುತ್ತಾರೆ. ಸಾಲ ಪಡೆದ ರೈತರಿಗೆ ಕೃಷಿ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿ, ಪಿಡಿಓ ಇತರೆ ಸಂಬಂಧಿಸಿದ ಅಧಿಕಾರಿಗಳು ಅವರ ಮನೆ ಬಾಗಲಿಗೆ ವಿಮೆಯನ್ನು ತಲುಪಿಸುವ ಕೆಲಸ ಮಾಡುತ್ತಾರೆ ಎಂದು ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ ತಿಳಿಸಿದರು.
ಲೀಡ್ ಬ್ಯಾಂಕ್ ಅಧಿಕಾರಿ ನೆಲ್ಸನ್, ರೈತರು, ಕೃಷಿ ಇಲಾಖೆ ಸಿಬ್ಬಂದಿಗಳು ಈ ವೇಳೆ ಹಾಜರಿದ್ದರು.

Related Posts

1 comment

GeorgeZew July 20, 2025 - 11:34 pm

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!