Home ರಾಜ್ಯಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್..!!!! ಅತ್ಯಾಚಾರಕ್ಕೆ ಒಳಗಾಗಿದ್ದರು ಪ್ರಕರಣ ರದ್ದುಪಡಿಸಲು ಕಾರಣವೇನು..?!

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್..!!!! ಅತ್ಯಾಚಾರಕ್ಕೆ ಒಳಗಾಗಿದ್ದರು ಪ್ರಕರಣ ರದ್ದುಪಡಿಸಲು ಕಾರಣವೇನು..?!

by EDITOR NEWS WARRIORS

ಬೆಂಗಳೂರು: ನಗರದ ಆರ್‌ಟಿ ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಬಾಲಕನ ಪರ ಆತನ ತಂದೆ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಸಂತ್ರಸ್ತೆ ಹಾಗೂ ಆರೋಪಿಯ ಪೋಷಕರು ಪರಸ್ಪರ ರಾಜಿ ಮಾಡಿಕೊಂಡಿರುವುದನ್ನು ಪರಿಗಣಿಸಿ ಈ ಮಹತ್ವದ ಆದೇಶ ಮಾಡಿದ್ದು.

ಏನಿದು ಪ್ರಕರಣ…?!


ನವೆಂಬರ್ 21/ 2021 ರಂದು ಕಾಲೇಜಿಗೆ ತೆರಳಿದ್ದ ಪುತ್ರಿ ಮನೆಗೆ ಮರಳಿಲ್ಲ ಎಂದು ಅಪ್ರಾಪ್ತೆಯ ತಂದೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಪೊಲೀಸರು ಆರೋಪಿ ಮತ್ತು ಸಂತ್ರಸ್ತೆಯ ಫೋನ್‌ ಟ್ರ್ಯಾಕ್‌ ಮಾಡಿ ಇಬ್ಬರನ್ನೂ ಪತ್ತೆ ಹಚ್ಚಿದ್ದರು. ಬಳಿಕ, ಆರೋಪಿ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದರು.

ಪರಸ್ಪರ ರಾಜಿಗೆ ಮುಂದಾದ ಸಂತ್ರಸ್ತೆ ಕಡೆಯವರು ಹಾಗೂ ಬಾಲಕನ ಕಡೆಯವರು :

ಸಂತ್ರಸ್ತೆ ಹಾಗೂ ಆರೋಪಿಯ ಬಾಲಕನ ಪೋಷಕರು ಪ್ರಕರಣಕ್ಕೆ ಅಂತ್ಯ ಹಾಡಲು ಬಯಸಿ, ವಿಚಾರಣೆ ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್ ನಿಂದ ಮಹತ್ವದ ಆದೇಶ :

ಒಂದೇ ತರಗತಿಯಲ್ಲಿ ಓದುತ್ತಿದ್ದ ಆರೋಪಿ ಹಾಗೂ ಸಂತ್ರಸ್ತೆ ಸ್ನೇಹಿತರಾಗಿದ್ದರು. ಪರಸ್ಪರ ಪ್ರೀತಿಸುತ್ತಿದ್ದ ಅವರು, ಮನೆಬಿಟ್ಟು ಚಿಕ್ಕಮಗಳೂರಿಗೆ ತೆರಳಿದ್ದರು. ಇಬ್ಬರ ನಡುವೆ ಮೂಡಿದ್ದ ಆಕರ್ಷಣೆಯಿಂದ ಈ ರೀತಿ ನಡೆದಿದ್ದು. ಸಂತ್ರಸ್ತೆಯೊಂದಿಗೆ ಪ್ರೀತಿಯಲ್ಲಿರುವ ಆರೋಪಿಯನ್ನು ಶಿಕ್ಷಿಸುವುದು ಪೋಕ್ಸೋ ಕಾಯ್ದೆಯ ಉದ್ದೇಶವಲ್ಲ ಎಂದು ಈಗಾಗಲೇ ಹಲವು ನ್ಯಾಯಾಲಯಗಳು ಆದೇಶಿಸಿವೆ. ಆದ್ದರಿಂದ ಕಾನೂನಿನ ಪರಿಣಾಮಗಳ ಅರಿವಿನ ಕೊರತೆಯಿಂದ ಹದಿಹರೆಯದವರು ಇಂತಹ ಪ್ರಕರಣಗಳಲ್ಲಿ ಸಿಲುಕಿಕೊಂಡರೆ ನ್ಯಾಯಾಲಯವು ಮುಕ್ತ ಮನಸ್ಸಿನಿಂದ ನೋಡಬೇಕಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಆದೇಶ :

ಈ ಪ್ರಕರಣದ ದಾಖಲೆ ಹಾಗೂ ಆರೋಪಿಯ ಪರೀಕ್ಷಾ ಅಂಕಪಟ್ಟಿ ನೋಡಿದರೆ ಆತ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು. ಪೋಷಕರು ರಾಜಿ ಮಾಡಿಕೊಂಡಿದ್ದು, ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ವಾಸ್ತವ ಪರಿಸ್ಥಿತಿ ಪರಿಗಣಿಸಿ ಪ್ರಕರಣವನ್ನು ಮುಕ್ತಾಯಗೊಳಿಸುವುದು ಸೂಕ್ತ. ಇಲ್ಲವಾದರೆ ಆರೋಪಿಯ ಭವಿಷ್ಯಕ್ಕೆ ಅಪಾಯವಾಗಲಿದ್ದು. ಮಕ್ಕಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಪ್ರಕರಣವನ್ನು ರದ್ದುಪಡಿಸಲಾಗಿದೆ ಎಂದು ನ್ಯಾಯಾಲಯವು ಆದೇಶ ನೀಡಿದೆ…

ರಘುರಾಜ್ ಹೆಚ್. ಕೆ …9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!