Home ರಾಜ್ಯಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಉತ್ಸವಕ್ಕೆ ಚಾಲನೆ!!

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಉತ್ಸವಕ್ಕೆ ಚಾಲನೆ!!

by EDITOR NEWS WARRIORS

ಬೆಂಗಳೂರು ಆಗಸ್ಟ್‌ 06: ಕರೋನಾ ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಾಯಿತು.

ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಿದ ನಟಿ ಭೂಮಿ ಶೆಟ್ಟಿ ಮಾತನಾಡಿ, ಕರೋನಾ ಕಾಲದಲ್ಲಿ ಎಲ್ಲರಿಗೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಅವರಿಗೆ ಮಾರುಕಟ್ಟೆಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಉತ್ಸವದಲ್ಲಿ ಪಾಲ್ಗೊಂಡು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಿ ಎಂದು ಮನವಿ ಮಾಡಿದರು.

ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಗಸ್ಟ್‌ 15 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಕರೋನಾ ಸಾಂಕ್ರಾಮಿಕ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್‌ ಶಂಕರ್‌, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ. ಕೆ.ಎಸ್‌ ಅಪ್ಪಾಜಯ್ಯ ಪಾಲ್ಗೊಂಡಿದ್ದರು.

ಮುಂಬರುವ ವರಮಹಾಲಕ್ಷ್ಮಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಾಗೂ ಕರೋನಾ ಲಾಕ್‌ಡೌನ್‌ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕರಕುಶಲಕರ್ಮಿಗಳಿಗೆ ಉತ್ತಮ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಉತ್ಸವ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್‌. ಶಂಕರ್‌, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ. ಕೆ.ಎಸ್‌ ಅಪ್ಪಾಜಯ್ಯ, ನಟಿ ಭೂಮಿ ಶೆಟ್ಟಿ ಪಾಲ್ಗೊಂಡಿದ್ದರು….

ವರದಿ.. ರಘುರಾಜ್ ಹೆಚ್ .ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!