Home ರಾಜ್ಯತೀರ್ಥಹಳ್ಳಿ::ಪ್ರಾ.ಆ.ಕೇಂದ್ರ ಮೇಗರವಳ್ಳಿಗೆ ಆರೋಗ್ಯ ಇಲಾಖಾ ರಾಜ್ಯ ಯೋಜನಾ ನಿರ್ದೇಶಕ ಡಾ.ಶ್ರೀನಿವಾಸ್ ಭೇಟಿ..!! ಅಗತ್ಯವಿರುವ ಸಿಬ್ಬಂದಿಗಳನ್ನು ಒದಗಿಸುವ ಭರವಸೆ..!!!

ತೀರ್ಥಹಳ್ಳಿ::ಪ್ರಾ.ಆ.ಕೇಂದ್ರ ಮೇಗರವಳ್ಳಿಗೆ ಆರೋಗ್ಯ ಇಲಾಖಾ ರಾಜ್ಯ ಯೋಜನಾ ನಿರ್ದೇಶಕ ಡಾ.ಶ್ರೀನಿವಾಸ್ ಭೇಟಿ..!! ಅಗತ್ಯವಿರುವ ಸಿಬ್ಬಂದಿಗಳನ್ನು ಒದಗಿಸುವ ಭರವಸೆ..!!!

by EDITOR NEWS WARRIORS

ಉಡುಪಿ ,ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗಾಗಿ ತೆರಳುತಿದ್ದ ಆರೋಗ್ಯ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕ(ಆರ್ ಸಿ ಹೆಚ್) ಡಾ.ಶ್ರೀನಿವಾಸ್ ಮಾರ್ಗ ಮಧ್ಯೆ ಪ್ರಾ.ಆ.ಕೇಂದ್ರ ಮೇಗರವಳ್ಳಿಗೆ ಅನಿರೀಕ್ಷಿತ ಬೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು,ಪ್ರಾ.ಆ.ಕೇಂದ್ರ ಮೇಗರವಳ್ಳಿಯ ವೈದ್ಯಾಧಿಕಾರಿ, ಸಿಬ್ಬಂದಿಗಳೊಂದಿಗೆ ಆಸ್ಪತ್ರೆಯ ಕುಂದುಕೊರತೆಗಳನ್ನು ಸರಿಪಡಿಸಿ ಜನರಿಗೆ ಇನ್ನಷ್ಟು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ದೊರಕಿಸುವತ್ತ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಪ್ರಾ.ಆ.ಕೇಂದ್ರ ಮೇಗರವಳ್ಳಿಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿ,ಲ್ಯಾಬ್ ಟೆಕ್ನಿಕಲ್ ಅಧಿಕಾರಿ, ಪ್ರಾ.ಆ.ಸುರಕ್ಷಾಧಿಕಾರಿ,ಪ್ರಾ.ಆ.ನಿರೀಕ್ಷಣಾಧಿಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಪ್ರಾ.ಆ.ಕೇಂದ್ರಕ್ಕೆ ಅಂಬ್ಯೂಲೆನ್ಸ್ ಸೌಲಭ್ಯ ಕಲ್ಪಿಸುವಂತೆ ಗ್ರಾಮ ಪಂಚಾಯತ್ ವತಿಯಿಂದ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರಿಗೆ ಯಾವುದೇ ನ್ಯೂನ್ಯತೆಗಳಾಗದಂತೆ ಸಮರ್ಪಕ ಆರೋಗ್ಯ ಸೇವೆಗಳನ್ನು ದೊರಕಿಸುವತ್ತ ವೈದ್ಯಾಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿ, ಹೆಚ್ಚಿನ ಸೌಲಭ್ಯಗಳನ್ನು ದೊರಕಿಸುವ ಬಗ್ಗೆ ಪರಿಶೀಲಿಸಿ ಸಾಧ್ಯವಿರುವ ಎಲ್ಲಾ ಅನುಕೂಲತೆ ಕಲ್ಪಿಸಿಕೊಡುವುದಾಗಿ ತಿಳಿಸಿದರು.

ತಮ್ಮ ಜನಪರ ಕಾಳಜಿ, ಪ್ರೇರಣಾತ್ಮಕ ನಡೆ ನುಡಿಗಳಿಂದ ಇಲಾಖೆಯಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆ ತರಲು  ವಿಶೇಷ ಶ್ರಮ ವಹಿಸುತ್ತಿರುವ ಅಪರೂದ ವ್ಯಕ್ತಿತ್ವದ ಸಹೃದಯಿ ಅಧಿಕಾರಿ ಡಾ.ಶ್ರೀನಿವಾಸ್ ರವರನ್ನು ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಪ್ರಾ.ಆ.ಕೇಂದ್ರದ ವತಿಯಿಂದ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಅಜಿತ್ ಅಣ್ಣುವಳ್ಳಿ,ಪಾರ್ವತಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಮೋದ್ ಹೆಗಡೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಪ್ರಾ.ಆ.ಕೇಂದ್ರ ಮೇಗರವಳ್ಳಿಯ ಆಯುಷ್ ವೈದ್ಯಾಧಿಕಾರಿ ಡಾ.ವಿನೋಧ್ ಕುಮಾರ್, ಸೇರಿದಂತೆ ಗ್ರಾಮ ಪಂಚಾಯತಿ ಹಾಗೂ ಪ್ರಾ.ಆ.ಕೇಂದ್ರ ಮೇಗರವಳ್ಳಿಯ ಸಿಬ್ಬಂದಿಗಳು ಹಾಜರಿದ್ದರು...

ರಘುರಾಜ್ ಹೆಚ್.ಕೆ…9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!