Home ರಾಜ್ಯThe police caught the robbers: ಕಳ್ಳತನ ಮಾಡಿದ 24 ಗಂಟೆ ಒಳಗೆ ಕಳ್ಳರನ್ನು ಹಿಡಿದ ವಿನೋಬನಗರದ ಪೊಲೀಸರು..!! ಬಹುಮಾನ ಘೋಷಿಸಿ ಪ್ರಶಂಸೆ ವ್ಯಕ್ತಪಡಿಸಿದ ಶಿವಮೊಗ್ಗ ಜಿಲ್ಲಾ ಅಧೀಕ್ಷಕರು..!!

The police caught the robbers: ಕಳ್ಳತನ ಮಾಡಿದ 24 ಗಂಟೆ ಒಳಗೆ ಕಳ್ಳರನ್ನು ಹಿಡಿದ ವಿನೋಬನಗರದ ಪೊಲೀಸರು..!! ಬಹುಮಾನ ಘೋಷಿಸಿ ಪ್ರಶಂಸೆ ವ್ಯಕ್ತಪಡಿಸಿದ ಶಿವಮೊಗ್ಗ ಜಿಲ್ಲಾ ಅಧೀಕ್ಷಕರು..!!

by EDITOR NEWS WARRIORS
  ‌ ಶಿವಮೊಗ್ಗ: ದಿನಾಂಕಃ 27-01-2023 ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ  ಆಲ್ಕೊಳ ಗ್ರಾಮದ ವಾಸಿ ಮಾಣಿಕ್ಯಂ ರವರು ತಮ್ಮ ಮನೆಗೆ ಬೀಗವನ್ನು ಹಾಕಿ,ಬೀಗದ ಕೀಯನ್ನು ಮನೆಯ ಆವರಣದಲ್ಲಿನ ನೀರಿನ ಮೋಟಾರ್ ಕೆಳಗೆ ಇಟ್ಟು ಹೋಗಿದ್ದು, ಯಾರೋ ಕಳ್ಳರು ಸದರಿ ಬೀಗದ ಕೀಯನ್ನು ತೆಗೆದುಕೊಂಡು, ಮನೆಯ ಬಾಗಿಲನ್ನು ತೆರೆದು ಒಳಗೆ ಹೋಗಿ,ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳು, ಬೆಳ್ಳಿಯ ಚೈನು ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ  ಸಂಖ್ಯೆ 0014/2023  ಕಲಂ 380 ಐಪಿಸಿ ರೀತ್ಯಾ ಪ್ರಕರಣವನ್ನು ದಾಖಲೆ ಮಾಡಿಕೊಂಡು ತನಿಖೆ ಕೈಗೊಂಡ ವಿನೋಬನಗರದ ಪೊಲೀಸರು. 

     ಮಿಥುನ್ ಕುಮಾರ್ ಜಿ.ಕೆ, ಐಪಿಎಸ್,  ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು  ಅನಿಲ್ ಕುಮಾರ್ ಭೂಮರಡ್ಡಿ,ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಸುರೇಶ್ ಎಂ,ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ ಉಪವಿಭಾಗ-ಬಿ ರವರ ಮೇಲ್ವಿಚಾರಣೆಯಲ್ಲಿ, ಸದರಿ ಪ್ರಕಣದಲ್ಲಿ ಕಳುವಾದ ವಸ್ತುಗಳು ಮತ್ತು ಆರೋಪಿತರ ಪತ್ತೆಗಾಗಿ  ರವಿ ಎನ್ ಎಸ್,ಪೊಲೀಸ್ ನಿರೀಕ್ಷಕರು, ವಿನೋಬನಗರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ರಮೇಶ್ ಎಎಸ್ಐ ಮತ್ತು ಸಿಬ್ಬಂದಿಗಳಾದ ಸಿಪಿಸಿ ರಾಜು ಕೆ.ಆರ್ ಮತ್ತು ಚಂದ್ರಾ ನಾಯ್ಕ್  ರವರುಗಳನ್ನೊಳಗೊಂಡ ತಂಡವನ್ನು ರಚನೆ ಮಾಡಲಾಗಿರುತ್ತದೆ.

    ಸದರಿ ತನಿಖಾ ತಂಡವು ಕೂಡಲೇ ಕಾರ್ಯ ಪ್ರವೃತ್ತರಾಗಿ ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿತರಾದ 1 ರಾಹುಲ್ ಎ.ಆರ್ ಬಿನ್ ಅಣ್ಣಪ್ಪ ಕೆ.ಆರ್, 26 ವರ್ಷ, ಶ್ರೀರಾಮ ಬಡಾವಣೆ ಆಂಜನೇಯ ದೇವಸ್ಥಾನದ ಹತ್ತಿರ ದಾವಣೆಗೆರೆ ಟೌನ್ ಮತ್ತು 2] ಗಣೇಶ ಬಿನ್ ಹಾಲೇಶಪ್ಪ, 28 ವರ್ಷ, ಬೊಮ್ಮನಕಟ್ಟೆ ಬಿ ಬ್ಲಾಕ್ ಕ್ಯಾಂಪ್ ಶಿವಮೊಗ್ಗ ಟೌನ್ ರವರನ್ನು ಪತ್ತೆ ಹಚ್ಚಿ ದಿನಾಂಕಃ 28-01-2023 ರಂದು ದಸ್ತಗಿರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ಮೌಲ್ಯ 1,09,250/-  ರೂ ಗಳ 30 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 100 ಗ್ರಾಂ ತೂಕದ ಬೆಳ್ಳಿಯ ಚೈನ್ ಅನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.

  ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿತರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ ತನಿಖಾ ತಂಡದ ಉತ್ತಮ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶ್ಲಾಘಿಸಿ ಬಹುಮಾನವನ್ನು ಘೋಷಿಸಿ ಅಭಿನಂದಿಸಿರುತ್ತಾರೆ...

ರಘುರಾಜ್ ಹೆಚ್.ಕೆ...9449553305...

Related Posts

1 comment

GeorgeZew July 20, 2025 - 7:17 am

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!