Home ರಾಜ್ಯIAS IPS tussled by Govt :ಐಎಎಸ್,ಐಪಿಎಸ್ ಅಧಿಕಾರಿಗಳ ಟಾಕ್ ವಾರ್..!!ಮುಜುಗರದಿಂದ ತಪ್ಪಿಸಿಕೊಂಡ ಸರ್ಕಾರ..!!

IAS IPS tussled by Govt :ಐಎಎಸ್,ಐಪಿಎಸ್ ಅಧಿಕಾರಿಗಳ ಟಾಕ್ ವಾರ್..!!ಮುಜುಗರದಿಂದ ತಪ್ಪಿಸಿಕೊಂಡ ಸರ್ಕಾರ..!!

by EDITOR NEWS WARRIORS

ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ… ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಡಿ. ರೂಪಾ ಅವರ ಪತಿ, ಐಎಎಸ್​ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಆರ್)ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ.

ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ. ಮೌನೀಶ್ ಮೌದ್ಗಿಲ್ ಅವರ ವರ್ಗಾವಣೆಯಿಂದ ತೆರವಾದ ಸರ್ವೆ ಮತ್ತು ಲ್ಯಾಂಡ್ ರೆಕಾರ್ಡ್ ಇಲಾಖೆಯ ಆಯುಕ್ತರ ಹುದ್ದೆಗೆ ಅಲ್ಲಿಯೇ ಹೆಚ್ಚುವರಿ ನಿದೇಶಕರಾಗಿದ್ದ ಸಿ.ಎನ್.ಸುಧೀಂದ್ರ ಅವರನ್ನು ನೇಮಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರ ಸ್ಥಾನಕ್ಕೆ ಬಸವರಾಜೇಂದ್ರ ಎಚ್ ಅವರನ್ನು ನೇಮಕ ಮಾಡಲಾಗಿದ್ದು, ಡಿ.ರೂಪಾ ಅವರ ಸ್ಥಾನಕ್ಕೆ ಭಾರತಿ.ಡಿ ಎಂಬುವವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಘುರಾಜ್ ಹೆಚ್.ಕೆ…9449553305…

Related Posts

1 comment

GeorgeZew July 20, 2025 - 8:01 pm

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!