Home ರಾಜ್ಯಶಿವಮೊಗ್ಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಟೈರ್ ಸುಟ್ಟು ಪ್ರತಿಭಟನೆಯ ಬಿಸಿ ಮುಟ್ಟಿಸಿದ ಅಭಿಮಾನಿಗಳು..!! ನಾಳೆ ಪತ್ರಿಕಾಗೋಷ್ಠಿ ಕರೆದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸುಂದರೇಶ್..!!

ಶಿವಮೊಗ್ಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಟೈರ್ ಸುಟ್ಟು ಪ್ರತಿಭಟನೆಯ ಬಿಸಿ ಮುಟ್ಟಿಸಿದ ಅಭಿಮಾನಿಗಳು..!! ನಾಳೆ ಪತ್ರಿಕಾಗೋಷ್ಠಿ ಕರೆದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸುಂದರೇಶ್..!!

by EDITOR NEWS WARRIORS

ಶಿವಮೊಗ್ಗ: ಟಿಕೆಟ್ ಗಾಗಿ ತೀವ್ರ ಕಸರತ್ತು ನಡೆಸಿದ್ದ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪಕ್ಷದ ಹೈಕಮಾಂಡ್ ನಿರಾಸೆ ಮಾಡಿದೆ.

ಪ್ರಬಲ ಆಕಾಂಕ್ಷಿಗಳಾಗಿದ್ದ ಮಾಜಿ ಎಂಎಲ್ಎ ಕೆಬಿ ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್, ಗ್ರಾಮಾಂತರದ ನಾರಾಯಣಸ್ವಾಮಿ, ಜಿ ಪಲ್ಲವಿ, ರವಿಕುಮಾರ್ ಅವರಿಗೆ ತೀವ್ರ ನಿರಾಶೆಯಾಗಿದೆ.

ಇನ್ನೊಬ್ಬ ಆಕಾಂಕ್ಷಿ ಮಹಾನಗರ ಪಾಲಿಕೆಯ ಸದಸ್ಯರಾದ ಮಾಜಿ ಎಂಎಲ್ಎ ಚಂದ್ರಶೇಖರಪ್ಪ ಪುತ್ರರಾದ ಯೋಗೀಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಇನ್ನೊಂದು ಕಡೆ ಶಿಕಾರಿಪುರದಲ್ಲಿ ನಾಗರಾಜ್ ಗೌಡ ಬದಲಿಗೆ ಗೋಣಿ ಮಾಲ್ತೇಶ್ ಕೆ ಟಿಕೆಟ್ ನೀಡಲಾಗಿದೆ.

ಇವೆಲ್ಲ ಬೆಳವಣಿಗೆಗಳಿಂದ ನೊಂದ‌ ಟಿಕಟ್ ಆಕಾಂಕ್ಷಿಗಳ ಅಭಿಮಾನಿಗಳು ಕಾರ್ಯಕರ್ತರು ಟೈರ್ ಸುಟ್ಟು ಪ್ರತಿಭಟನೆ ಮಾಡುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಹಾಗೆ ತಮ್ಮ ತಮ್ಮ ನಾಯಕರಿಗೆ ಟಿಕೆಟ್ ನೀಡಬೇಕು ಟಿಕೆಟ್ ಹಂಚಿಕೆ ಪ್ರಕ್ರಿಯೆ ಸರಿಯಿಲ್ಲ ಮತ್ತೆ ಪರಿಶೀಲನೆ ನಡೆಸಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ…

ಗ್ರಾಮಾಂತರ ಭಾಗದಲ್ಲಿ ನಾರಾಯಣಸ್ವಾಮಿ ಪಕ್ಷೇತರ ಅಭ್ಯರ್ಥಿಯಾಗಿ, ಶಿಕಾರಿಪುರದಲ್ಲಿ ನಾಗರಾಜ್ ಗೌಡ ಪಕ್ಷೇತರ ಅಭ್ಯರ್ಥಿಯಾಗಿ, ನಿಲ್ಲಲು ತಯಾರಿ ನಡೆಸಿದ್ದಾರೆ…

ಇವೆಲ್ಲ ಬೆಳವಣಿಗೆಗಳ ಮಧ್ಯೆ ನಾಳೆ ಜಿಲ್ಲಾ ಅಧ್ಯಕ್ಷರಾದ ಸುಂದರೇಶ್ ಅವರು ಪತ್ರಿಕಾಗೋಷ್ಠಿ ಕರೆದಿದ್ದು ಟಿಕೆಟ್ ಹಂಚಿಕೆ ಬಗ್ಗೆ ಅಭಿಮಾನಿಗಳ ಕಾರ್ಯಕರ್ತರ ಆಕ್ರೋಶದ ಬಗ್ಗೆ ಮುಂದಿನ ಪಕ್ಷದ ನಿಲುವಿನ ಬಗ್ಗೆ ಯಾವ ನಿರ್ಧಾರ ಪ್ರಕಟಿಸುತ್ತಾರೆ ಕಾದು ನೋಡಬೇಕು…

ರಘುರಾಜ್ ಹೆಚ್.ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!