Home ರಾಜ್ಯಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಎನ್ ಎಮ್ ಸುರೇಶ್ ನಾಮಪತ್ರ ಸಲ್ಲಿಕೆ..!

ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಎನ್ ಎಮ್ ಸುರೇಶ್ ನಾಮಪತ್ರ ಸಲ್ಲಿಕೆ..!

by EDITOR NEWS WARRIORS

ಕೊನೆಗೂ ನಿಗಧಿಯಾಯ್ತು ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಎನ್ ಎಮ್ ಸುರೇಶ್ ನಾಮಪತ್ರ ಸಲ್ಲಿಸಿಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣಾ ದಿನಾಂಕ ಕೊನೆಗೂ ಘೋಷಣೆಯಗಿದೆ. ಸೆಪ್ಟಂಬರ್ 23ರಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯುತ್ತಿದೆ. ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಪ್ರತಿ ಬಾರಿಯೂ ಪೈಪೋಟಿ ಜೋರಾಗಿ ಇರುತ್ತದೆ. ಈ ಭಾರಿ ಕೂಡ ಹೊರತಾಗಿಲ್ಲ. ಈ ಬಾರಿ ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿ ನಿರ್ಮಾಪಕ ಎನ್ ಎಮ್ ಸುರೇಶ್ ಕೂಡ ಇದ್ದಾರೆ.

ಹೌದು, ಈ ಭಾರಿಯ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಎನ್ ಎಮ್ ಸುರೇಶ್ ಸ್ಪರ್ಧೆ ಮಾಡುತ್ತಿದ್ದು ಇಂದು (ಸೆಪ್ಟಂಬರ್ 8ಕ್ಕೆ) ನಾಮಪತ್ರ ಸಲ್ಲಿಸಿದ್ದಾರೆ. ಫಿಲ್ಮ್ ಚೇಂಬರ್‌ಗೆ ಆಗಮಿಸಿದ ಎನ್ ಎಮ್ ಸುರೇಶ್, ಡಾ. ರಾಜ್ ಕುಮಾರ್ ಪ್ರತಿಮೆಗೆ ಹಾರ ಹಾಕಿ ನಮಸ್ಕರಿಸಿ ಫಿಲ್ಮ್ ಚೇಂಬರ್ ಗೆ ಎಂಟ್ರಿ ಕೊಟ್ಟರು. ಸಾರಾ ಗೋವಿಂದ್ ಬಣ ಸೇರಿದಂತೆ ಆನೇಕ ವಿತರಕರು, ನಿರ್ಮಾಪರು ದೊಡ್ಡ ಮಟ್ಟದಲ್ಲಿ ಸೇರಿ ಎನ್ ಎಮ್ ಸುರೇಶ್ ಅವರಿಗೆ ಸಾಥ್ ನೀಡಿದರು. ಬಳಿಕ ನಾಮಪತ್ರ ಸಲ್ಲಿಸಿ ಮಾತನಾಡಿದ ಎನ್ ಎಮ್ ಸುರೇಶ್, ‘ಸಾರಾ ಗೋವಿಂದ್ ನನ್ನ ಮೇಲಿನ ಪ್ರೀತಿಗಾಗಿ ಬಂದಿದ್ದಾರೆ. ನನಗೆ ಇವತ್ತು ಈ ಭಾಗ್ಯ ಸಿಕ್ಕಿರುವುದು ನನ್ನ ಪುಣ್ಯ. ಒಳ್ಳೆಯ ಅಭ್ಯರ್ಥಿಗಳನ್ನು ಗೆಲ್ಲಿಸಿ.ಈಗಲೇ ಅದು ಮಾಡುತ್ತೇನೆ ಇದು ಮಾಡ್ತಿನಿ ಅಂತ ಹೇಳಲ್ಲ. ಆದರೆ ದೊಡ್ಡ ಸಮಸ್ಯೆಗಳಿವೆ ಅವುಗಳನ್ನು ಸರಿಪಡಿಸುವ ಕೆಲಸ ಖಂಡಿತ ಮಾಡುತ್ತೇನೆ. ಅವಕಾಶ ಕೋಡಿ’ ಎಂದು ಕೇಳಿಕೊಂಡರು.

ಸಾರಾ ಗೋವಿಂದ್ ಮಾತನಾಡಿ, ‘ಬಹಳ ದಿನ ಆದ್ಮೆಲೆ ಸಿಕ್ತಾ ಇದಿನಿ.
ಈ ಬಾರಿಯ ಚುನಾವಣೆ ಪ್ರಾಮುಖ್ಯತೆ ಪಡೆದು ಕೊಂಡಿದೆ. ಪೈಪೋಟಿಯಲ್ಲಿ ನಡೆಯುತ್ತಿರುವುದು ಖುಷಿ ಆಗುತ್ತಿದೆ. ಎನ್ ಎಮ್ ಕುಮಾರ್ ಎಲ್ಲರ ಪ್ರೀತಿ, ಬೆಂಬಲದಿಂದ ನಾಮಪತ್ರ ಸಲ್ಲಿಸಿದ್ದಾರೆ. ಎನ್ ಎಮ್ ಸುರೇಶ್ ಅವರಿಗೆ ಬೆಂಬಲ ನೀಡುತ್ತಿದ್ದೀನಿ. ಅವರವರ ಯೋಗ್ಯತೆ ನೋಡಿಕೊಂಡು ಗೆಲ್ಲಿಸಿ’ ಎಂದು ಹೇಳಿದರು.

2003ರಲ್ಲಿ ರಿಲೀಸ್ ಆದ ಹಿಟ್ ಎಕ್ಸ್‌ಕ್ಯೂಸ್‌ಮೀ ಸಿನಿಮಾಗೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿ ಗುರುತಿಸಿಕೊಂಡ ಎನ್ ಎಮ್ ಸುರೇಶ್ ಬಳಿಕ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕಳೆದ ಬಾರಿ ಫಿಲ್ಮ್ ಚೇಂಬರ್ ಕಾರ್ಯದರ್ಶಿ ಆಗಿದ್ದ ಸುರೇಶ್ ಇದೀಗ ಮೊದಲ ಬಾರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.

ಅಂದಹಾಗೆ ಈ ಬಾರೆಯ ಚುನಾವಣೆ ವಿಳಂಬವಾಗಿದೆ. ಅಂದುಕೊಂಡಂತೆ ಆಗಿದ್ದರೆ ಮೇ ತಿಂಗಳಲ್ಲೆ ಚುನಾವಣೆ ನಡೆದು ಫಲಿತಾಂಶ ಕೂಡ ಹೊರಬೀಳಬೇಕಿತ್ತು. ಆದರೆ ಈ ಬಾರಿ ಸೆಪ್ಟಂಬರ್‌ನಲ್ಲಿ ನಡೆಯುತ್ತಿದೆ.

ಇನ್ನು ಕಳೆದ ಬಾರಿ 2022ರಲ್ಲಿ ನಡೆದ ಚುನಾವಣೆಯಲ್ಲಿ ಭಾ.ಮ. ಹರೀಶ್​ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಅವರ ಅಧಿಕಾರದ ಅವಧಿ 2023ರ ಮೇ 28ಕ್ಕೆ ಅಂತ್ಯವಾಗಿದೆ. ಹಾಗಿದ್ದರೂ ಕೂಡ ಚುನಾವಣೆ ನಡೆಸಿರಲಿಲ್ಲ. ಇದೀಗ ಚುನಾವಣೆ ದಿನಾಂಕ ನಿಗಧಿಯಾಗಿದ್ದು ಎಮ್ ಎನ್ ಸುರೇಶ್ ನಾಮಪತ್ರ ಕೂಡ ಸಲ್ಲಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಎಮ್ ಎನ್ ಸುರೇಶ್ ಗೆಲುವು ದಾಖಲಿಸಿವುದು ಬಹುತೇಕ ಖಚಿತವಾಗಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!