Home ರಾಜ್ಯBreaking news: ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ..!

Breaking news: ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ..!

by EDITOR NEWS WARRIORS

ಬಹುದಿನಗಳ ಬೇಡಿಕೆಯಾಗಿದ್ದ ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಕಾಯ್ದೆಯನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ.

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ ಪಡೆದುಕೊಂಡಿದೆ.


ಕಾಯ್ದೆಯ ಪ್ರಮುಖ ಅಂಶಗಳು.

1)ಈ ಪ್ರಸ್ತಾಪಿತ ಕಾಯ್ದೆ ಪ್ರಕಾರ ವಕೀಲರ ಮೇಲೆ ಅಪರಾಧ ಎಸಗುವ ಪ್ರತಿಯೊಬ್ಬ ಅಪರಾಧಿಯು ಆರು ತಿಂಗಳಿನಿಂದ ಮೂರು ವರ್ಷದ ವರೆಗೆ ವಿಸ್ತರಿಸಬಹುದಾದ ಅವಧಿಯ ಜೈಲು ಅಥವಾ ಒಂದು ಲಕ್ಷ ರೂಪಾಯಿ ದಂಡನೆಗೆ ಒಳಗಾಗುತ್ತಾರೆ.

2) ಅಥವಾ‌ ಮೇಲಿನ ಎರಡನ್ನೂ ವಿಧಿಸಬಹುದಾದ ಶಿಕ್ಷೆಗೆ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು.

ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ವಕೀಲರ ಮೇಲೆ ಹಲ್ಲೆ, ದೌರ್ಜನ್ಯದಂತ ಅಪರಾಧಗಳು ನಡೆದರೆ ಅಥವಾ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ, ಅಂತಹ ವ್ಯಕ್ತಿಗಳನ್ನು ಈ ಕಾಯ್ದೆ ಪ್ರಕಾರ ವಿಚಾರಣೆ ಬಳಿಕ ದಂಡನೆಗೆ ಗುರಿಪಡಿಸಬಹುದು.

ಸಂಜ್ಞೇಯ ಅಪರಾಧಕ್ಕೆ ಸಂಬಂಧಿಸಿದಂತೆ ಯಾವುದೇ ವಕೀಲರನ್ನು ಪೊಲೀಸರು ಬಂಧಿಸಿದಾಗ ಅಂತಹ ಬಂಧನದ 24 ಗಂಟೆಯ ಒಳಗೆ ಆರೋಪಿತ ವಕೀಲರು ಸದಸ್ಯರಾಗಿರುವ ವಕೀಲರ ಸಂಘದ ಅಧ್ಯಕ್ಷ ಅಥವಾ ಕಾರ್ಯದರ್ಶಿಗೆ ಮಾಹಿತಿ ನೀಡತಕ್ಕದ್ದು.

ದಂಡನೀಯವಾದ ಪ್ರತಿಯೊಂದು ಅಪರಾಧವನ್ನು ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಗಳಿಗೆ ಕಡಿಮೆ ಇರದ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಎಂದು ಕಾಯ್ದೆಯಲ್ಲಿ ವಿಧಿಸಲಾಗಿದೆ.

ಬಹುದಿನಗಳ ಬೇಡಿಕೆಯಾಗಿದ್ದ ವಕೀಲರ ಸಂರಕ್ಷಣಾ ಕಾಯಿದೆ ಕೊನೆಗೂ ಜಾರಿಗೆ ಬಂದಿದ್ದು ಇನ್ನು ಮುಂದಾದರೂ ವಕೀಲರ  ಮೇಲೆ ಹಲ್ಲೆ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆ ಇದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!