Home ರಾಜ್ಯBig news:ಸಚಿವ ಮಧು ಬಂಗಾರಪ್ಪಗೆ ದಂಡ ಕಟ್ಟದಿದ್ದರೆ ಜೈಲು ಶಿಕ್ಷೆ..!ಏನಿದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು..!

Big news:ಸಚಿವ ಮಧು ಬಂಗಾರಪ್ಪಗೆ ದಂಡ ಕಟ್ಟದಿದ್ದರೆ ಜೈಲು ಶಿಕ್ಷೆ..!ಏನಿದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು..!

by EDITOR NEWS WARRIORS

ಬೆಂಗಳೂರು:ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪನ್ನು ನೀಡಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿದೆ.

ಏನಿದು ಪ್ರಕರಣ:

2011ರ ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿದೆಯಲ್ಲದೆ, ಒಂದು ವೇಳೆ ದಂಡ ಪಾವತಿ ಮಾಡದಿದ್ದರೆ 6 ತಿಂಗಳು ಜೈಲುವಾಸದ ಶಿಕ್ಷೆಯನ್ನು ನೀಡಿ ಆದೇಶಿಸಿದೆ ‌

ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6.60 ಕೋಟಿ ರೂಪಾಯಿ ಮೌಲ್ಯದ ಚಕ್ ಒಂದನ್ನು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ನೀಡಿದ್ದರು. ಆದರೆ ಚೆಕ್‌ಬೌನ್ಸ್‌ ಆಗಿತ್ತು. ವಿಚಾರಣೆ ಮಾಡಿದರೆ ಮಧು ಬಂಗಾರಪ್ಪ ಉಡಾಫೆಯಾಗಿ ವರ್ತಿಸಿದ ಹಿನ್ನಲೆಯಲ್ಲಿ ಚೆಕ್‌ಬೌನ್ಸ್‌ ಪ್ರಕರಣವನ್ನು ದಾಖಲು ಮಾಡಲಾಗಿತ್ತು.

ಈ ಪ್ರಕರಣದ ಅರ್ಜಿಯನ್ನು ವಿಚಾರಣೆ ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ 6,96,70,000 ರೂ. (6.96 ಕೋಟಿ ರೂ.) ದಂಡವನ್ನು ವಿಧಿಸಿದೆ.

ಆದರೆ ಜ.30 ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದರೆ‌ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಚ್ಚಳಿಕೆ ಒಪ್ಪಲು ನಿರಾಕರಿಸಿತ್ತು.

ಯಾಕೆಂದರೆ ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ ಎಂದು ಮಾನ್ಯ ನ್ಯಾಯಾಧೀಶರಾದ ಜೆ.ಪ್ರೀತ್ ಮನವಿ ತಿರಸ್ಕರಿಸಿ ಆದೇಶ ಹೊರಡಿಸಿದ್ದರು.


ದಂಡದ ಹಣದಲ್ಲಿ 6,96,60,000 ರೂ. ಹಣವನ್ನು ದೂರುದಾರರಿಗೆ ಪರಿಹಾರವಾಗಿ ನೀಡಬೇಕು ಮತ್ತು ಉಳಿದ 10 ಸಾವಿರ ರೂ. ಹಣವನ್ನು ಸರ್ಕಾರಕ್ಕೆ ದಂಡವಾಗಿ ಪಾವತಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!