Home ಶಿವಮೊಗ್ಗShivamogga:ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ..!

Shivamogga:ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ..!

by EDITOR NEWS WARRIORS

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆಯನ್ನು ಖಂಡಿಸಿ
ದೆಹಲಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಎಲ್ಲಾ ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ನಡೆಯುತ್ತಿರುವ ದೆಹಲಿ ಚಲೋ ಬೆಂಬಲಿಸಿ ಇಂದು ವಿನೋಬನಗರ ಪೊಲೀಸ್ ಚೌಕಿ ವೃತ್ತ ಪ್ರತಿಭಟನೆ ನಡೆಸಿ ನಂತರ ಶಿವಮೊಗ್ಗ ಕ್ಷೇತ್ರದ ಸಂಸದ ರಾಘವೇಂದ್ರ ಅವರ ಮನೆಗೆ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಐವತ್ತಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರವು 2017 – 18 ರಿಂದ ಇಲ್ಲಿಯವರೆಗೆ ಕರ್ನಾಟಕ ರಾಜ್ಯಕ್ಕೆ ಜಿ ಎಸ್ ಟಿ ಯ ಪರಿಹಾರದ ನಿಧಿಯಾದ 1,87,000 ಕೋಟಿಗೊಳಷ್ಟು ಹಣವನ್ನು ನೀಡದೆ ಅನ್ಯಾಯ ಮಾಡಿ ಈ ವರ್ಷ ಇಡೀ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಅನ್ನು ಕಟ್ಟುವ ರಾಜ್ಯ ಎಂದರೆ ಅದು ಕರ್ನಾಟಕ ಕರ್ನಾಟಕ ರಾಜ್ಯದಿಂದ ಗೆದ್ದು ಹೋದ ಬಿಜೆಪಿ 25 ಸಂಸದರು ಸಂಸತ್ ನಲ್ಲಿ ತುಟಿ ಬಿಚ್ಚದೆ ರಾಜ್ಯಕ್ಕೆ ಬರಬೇಕಾದ ಪರಿಹಾರ ಹಾಗೂ ರೈತರ ಬರ ಪರಿಹಾರ, ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಹಲವಾರು ಯೋಜನೆಗಳ ಪಾಲನ್ನು ಕೇಳದೆ ಅಸಮರ್ಥ ತುಟಿ ಬಿಚ್ಚಿದ ಸಂಸದರಾಗಿದ್ದಾರೆ ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡಿಸಬೇಕೆಂದು ಈ ಮೂಲಕ ಯುವ ಕಾಂಗ್ರೆಸ್ ಆಗ್ರಹಿಸುತ್ತದೆ.

ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್, ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್ ಪಿ ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್, ಎಸ್ ಕುಮಾರೇಶ್ ,ಪ್ರಮುಖರಾದ ಎಚ್ ಪಾಲಾಕ್ಷಿ, ಎಂ . ರಾಹುಲ್,ಸಂದೀಪ್ ಸುಂದರ್ ರಾಜ್ , ,ಎಂ. ರಾಕೇಶ್, ಸುಹಾಸ್ ಗೌಡ, ಎನ್.ಎಸ್ ಆನಂದ್, ನದೀಮ್ ಮದರಿ ಪಾಳ್ಯ ಮುಕ್ಬಲ್ ಸೋಮಿನಕೊಪ್ಪ, ಚಂದ್ರಶೇಖರ್, ,ಪ್ರಶಾಂತ್ ರಾಯ್ , ಗೋಪಿ ,ಏನೋಶ್, ಇನ್ಶಾಲ್, ರಾಯಿಲ್, ಪ್ರಶಾಂತ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!