Home ಶಿವಮೊಗ್ಗಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಥಮ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಆಡಳಿತ ಉಸ್ತುವಾರಿಗಳಾದ  ಸಿ. ಎಸ್. ಚಂದ್ರಭೂಪಾಲ ನೇಮಕ..!   

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಥಮ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಆಡಳಿತ ಉಸ್ತುವಾರಿಗಳಾದ  ಸಿ. ಎಸ್. ಚಂದ್ರಭೂಪಾಲ ನೇಮಕ..!   

by EDITOR NEWS WARRIORS


ಶಿವಮೊಗ್ಗ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ನೂತನ ಪ್ರಾಧಿಕಾರದ ಜಿಲ್ಲಾ ಮಟ್ಟದ ಪ್ರಥಮಅಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯ ದರ್ಶಿ ಮತ್ತು ಆಡಳಿತ ಉಸ್ತುವಾರಿ ಗಳಾದ  ಸಿ. ಎಸ್. ಚಂದ್ರಭೂಪಾಲ ಅವರನ್ನು ನೇಮಕಮಾಡಿ ಕರ್ನಾಟಕ ರಾಜ್ಯ ಸರ್ಕಾರ
ಆದೇಶ ಹೊರಡಿಸಿದೆ.

ಸಿ.ಎಸ್.ಚಂದ್ರಭೂಪಾಲರವರು ಕಾಂಗ್ರೆಸ್
ಪಕ್ಷದಲ್ಲಿ ಹಿರಿಯ ಕಾರ್ಯಕರ್ತರಾಗಿ ನಿತ್ಯಾ
ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿಸುತ್ತಿದ್ದಾರೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಸಂಯೋಜಕ ರಾಗಿ ಮತ್ತು ಅಹಿಂದ ಸಂಘಟನೆಯಜಿಲ್ಲಾ ಅಧ್ಯಕ್ಷರಾಗಿ ಸಾರ್ವಜನಿಕರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಮಡಿವಾಳ ಸಮಾಜದ  ಸಿ.ಎಸ್.ಚಂದ್ರ ಭೂಪಾಲ ರವರು ಸ್ವಜಾತಿ ಸಂಘಟನೆಯ
ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಮಾಜಿ ಉಪಾಧ್ಯಕ್ಷರಾಗಿ ಮತ್ತು‌ ಶಿವಮೊಗ್ಗ
ಜಿಲ್ಲಾ ಮಡಿವಾಳ ಸಮಾಜ ಸಂಘ ಮಾಜಿ
ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಸರ್ಕಾರದ ಐತಿಹಾಸಿಕ 05 ಗ್ಯಾರಂಟಿಗಳು
ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಮತ್ತು ಯುವನಿಧಿ ಯೋಜನೆಗಳು ಈಗಾಗ ಲೇ ರಾಜ್ಯದಲ್ಲಿ ಜಾರಿಗೊಂಡಿದ್ದು ಈ ಐದು ಗ್ಯಾರಂಟಿ ಯೋಜನೆಯ ಲಾಭವು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ರಾಜ್ಯ ಮತ್ತು ಜಿಲ್ಲಾ ಹಾಗೂ ತಾಲೂಕ ಮಟ್ಟದಲ್ಲಿ ಐದು ಗ್ಯಾರಂಟಿ ಗಳು ಯೋಜನೆಗಳ ಅನುಷ್ಠಾನಪ್ರಾಧಿಕಾರವನ್ನು
ರಾಜ್ಯ ಸರ್ಕಾರ ರಚನೆ ಮಾಡಿ ಶಿವಮೊಗ್ಗ
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು , ಸದಸ್ಯರುಗಳನ್ನು ಹಾಗೂ ತಾಲೂಕುಅಧ್ಯಕ್ಷರುಗಳನ್ನು ರಾಜ್ಯಸರ್ಕಾರ ನೇಮಕ ಮಾಡಿದೆ ಜಿಲ್ಲಾಮಟ್ಟದ ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ರವರು ಕಾರ್ಯನಿರ್ವಹಿಸುತ್ತಾರೆ.

ಪತ್ರಿಕಾ ಕ್ಷೇತ್ರ-ಸಹಕಾರ ಕ್ಷೇತ್ರ- ಶಿಕ್ಷಣ ಕ್ಷೇತ್ರ ಮತ್ತು ಧಾರ್ಮಿಕ ಕ್ಷೇತ್ರದ ವಿವಿಧ ಪ್ರಬುದ್ಧ ವಾದ ಸಂಘ ,ಸಂಸ್ಥೆಗಳಲ್ಲಿ ಗುರುತರವಾದ ಹೊಣೆಗಾರಿಕೆ ಸ್ಥಾನಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿರುವ ಸಿ. ಎಸ್. ಚಂದ್ರ ಭೂಪಾಲ ರವರು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಗ್ಯಾರಂಟಿಗಳ ಅನುಷ್ಠಾನದಲ್ಲಿ  ಕಾರ್ಯಚಟುವಟಿಕೆ ನಡೆಸಲಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!