Home ಬಿಜೆಪಿBig breaking news:ಪ್ರಧಾನಿ ಮೋದಿ ಭಾವಚಿತ್ರ ಉಳಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸಿದ ಈಶ್ವರಪ್ಪ..!

Big breaking news:ಪ್ರಧಾನಿ ಮೋದಿ ಭಾವಚಿತ್ರ ಉಳಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸಿದ ಈಶ್ವರಪ್ಪ..!

by EDITOR NEWS WARRIORS

ಮೋದಿ ಭಾವಚಿತ್ರಕ್ಕಾಗಿ ಬಿಗ್ ಫೈಟ್ ಶುರುವಾಗಿದ್ದು ಸಂಸದರಾದ ಬಿ ವೈ ರಾಘವೇಂದ್ರ ಅವರು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರು ಮೋದಿ ಭಾವಚಿತ್ರ ಬಳಸಿಕೊಂಡು ಪ್ರಚಾರಕ್ಕೆ ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ಉತ್ತರ ನೀಡಿದ ಈಶ್ವರಪ್ಪನವರು ಮೋದಿ ಭಾವಚಿತ್ರ ಯಾರು ಬೇಕಾದರೂ ಬಳಸಿಕೊಳ್ಳಬಹುದು ಮೋದಿ ಏನು ಅವರಪ್ಪನ ಆಸ್ತಿನಾ ಎಂದು ತಿರುಗೇಟು ನೀಡಿದ್ದರು.

ನ್ಯಾಯಾಲಯದಲ್ಲಿ ಮೋದಿ ಭಾವಚಿತ್ರಕ್ಕಾಗಿ ಮುನ್ನೆಚ್ಚರಿಕೆ ವಹಿಸಿದ ಮಾಜಿ ಸಚಿವ ಈಶ್ವರಪ್ಪ :

ಮೋದಿ ಅವರ ಭಾವಚಿತ್ರವನ್ನು ಬಳಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಈಶ್ವರಪ್ಪನವರು ನ್ಯಾಯಾಲಯದಲ್ಲಿ  ಕೆವಿಯಟ್  ಸಲ್ಲಿಸಿದ್ದು ಮೋದಿ ಅವರ ಭಾವಚಿತ್ರವನ್ನು ಬಳಸಿಕೊಳ್ಳುವುದನ್ನು ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದರೆ ಅದಕ್ಕೆ ಮುನ್ನೆಚ್ಚರಿಕೆವಾಗಿ ತಾವು ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದು ಭಾರತೀಯ ಸಂವಿಧಾನದಲ್ಲಿ ಎಲ್ಲಾ ಭಾರತೀಯರು ಹೆಮ್ಮೆಯ ಪ್ರಧಾನಿಯ ಭಾವಚಿತ್ರವನ್ನು ಬಳಸಿಕೊಳ್ಳಲು ಅವಕಾಶವಿದೆ. ಅದರ ವಿರುದ್ಧ ಯಾರಾದರೂ ದಾವೇ ಹೂಡಿದರೆ ತಡೆಯಲು ಮುಂಜಾಗ್ರತ ಕ್ರಮವಾಗಿ ಘನ ನ್ಯಾಯಾಲಯದಲ್ಲಿ ಕೆವಿಯಟ್ ಸಲ್ಲಿಸಿದ್ದು ಇದರ ಅವಧಿ ಮೂರು ತಿಂಗಳಾಗಿರುತ್ತದೆ. ಅಷ್ಟರಲ್ಲಿ ಚುನಾವಣೆ ಮುಗಿದಿರುತ್ತದೆ ಯಾರು ಕೂಡ ಇದರ ವಿರುದ್ಧ ಇಂಜೆಕ್ಷನ್ ಆರ್ಡರ್ ತರಲು ಬರುವುದಿಲ್ಲ. ಎನ್ನುವುದು ಈಶ್ವರಪ್ಪನವರ ಲೆಕ್ಕಾಚಾರ. ಅಲ್ಲಿಗೆ ಮೋದಿ ಭಾವಚಿತ್ರ ಬಳಸಿಕೊಳ್ಳಲು ಈಶ್ವರಪ್ಪನವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದಾಯಿತು.

ರಘುರಾಜ್ ಹೆಚ್‌. ಕೆ..9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!