Home ರಾಜ್ಯಶಿವಮೊಗ್ಗ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ..!

ಶಿವಮೊಗ್ಗ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ..!

by EDITOR NEWS WARRIORS

ಶಿವಮೊಗ್ಗ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಗಾಗಿ ನೇರ ಸಂದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು.

ಖಾಲಿ ಇರುವ ಹುದ್ದೆಗಳ ವಿವರ:

ಇಎನ್‍ಟಿ ಸರ್ಜನ್ -01, ಅರವಳಿಕೆ ತಜ್ಞರು -02, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು-01, ವೈದ್ಯರು-24, ನೇತ್ರ ಸಹಾಯಕರು-02, ಆಡಿಯೋಮೆಟ್ರಿಕ್ ಅಸಿಸ್ಟೆಂಟ್-01, ಶ್ರವಣದೋಷವುಳ್ಳ ಮಕ್ಕಳ ಬೋಧಕರು-01, ತಾಲೂಕು ಆಶಾ ಮೇಲ್ವಿಚಾರಕರು-01, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು (ಕಿ.ಮ.ಆ.ಸ) ಎನ್‍ಹೆಚ್‍ಎಂ-02 ಮತ್ತು ಎನ್‍ಯುಹೆಚ್‍ಎಂ- 01, ಶುಶ್ರೂಷಕಿಯರು (ಶುಶ್ರೂಷಣಾಧಿಕಾರಿಗಳು ಮಹಿಳೆಯರು)-24, ಕಿರಿಯ ಪುರಷ ಆರೋಗ್ಯ ಸಹಾಯಕರು (ಆರೋಗ್ಯ ನಿರೀಕ್ಷಣಾಧಿಕಾರಿಗಳು)-01, ಡಿಇಐಸಿ ಮ್ಯಾನೇಜರ್ -01 ಹುದ್ದೆಗಳು.

ತಜ್ಞವೈದ್ಯರು ಮತ್ತು ವೈದ್ಯರು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು ಹಾಗೂ ದೈಹಿಕ ಪ್ರಮಾಣ ಪತ್ರ ನೀಡುವುದು. ಕೆಎಂಸಿಯ ನೋಂದಣಿಯನ್ನು ಹೊಂದಿರತಕ್ಕದ್ದು. ಹಾಗೂ ಸರ್ಕಾರದ ನಿಯಮಾವಳಿಯಂತೆ ಎನ್.ಹೆಚ್.ಎಂ /ಎನ್‍ಯುಹೆಚ್‍ಎಂ ಮಾರ್ಗಸೂಚಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುವುದು. ಹುದ್ದೆಗಳನ್ನು ಕಡಿತಗೊಳಿಸುವುದು ಮತ್ತು ಹೆಚ್ಚಿಸುವುದು ಹಾಗೂ ಅರ್ಜಿಯನ್ನು ತಿರಸ್ಕರಿಸುವುದು ಜಿಲ್ಲಾ ಆರೋಗ್ಯ ಸಂಘದ ನಿರ್ಧಾರವೇ ಅಂತಿಮವಾಗಿರುತ್ತದೆ.

ಎನ್.ಹೆಚ್.ಎಂ /ಎನ್‍ಯುಹೆಚ್‍ಎಂ ಮಾರ್ಗಸೂಚಿಯಂತೆ ನೇಮಕಾತಿಯ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲಿನ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ಕ್ರ.ಸಂ 11ಕ್ಕೆ ಸಂಬಂಧಿಸಿದಂತೆ ವಾಸಸ್ಥಳದ ಬಗ್ಗೆ ಪಾಲಿಕೆ/ಸಂಬಂಧಿಸಿದ ಪಂಚಾಯತ್‍ನಿಂದ ದೃಢೀಕರಣ ಪತ್ರ ಮತ್ತು ಸ್ವವಿವರದೊಂದಿಗೆ ಹಾಜರಾಗಬಹುದು.

ದಿನಾಂಕ : 11.07.2024 ರಂದು ಬೆಳಗ್ಗೆ 10.30 ರಿಂದ ಮಾಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಗಳನ್ನು ಎನ್‍ಹೆಚ್‍ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್‍ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುವುದು ಹಾಗೂ ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ನಡೆಸಿ, ಸಂಜೆ 5.30 ರವರೆಗೆ ನೇರ ಸಂದರ್ಶನ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗೆ ದೂ.ಸಂ: 08182-200337 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಸಂಘ ಹಾಗೂ ಜಿಲ್ಲಾ ಆರ್‍ಸಿಹೆಚ್ ನಾಗರಾಜ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!