Home ಶಿವಮೊಗ್ಗತೀರ್ಥಹಳ್ಳಿ ರಾಜಕೀಯದ ಬಗ್ಗೆ ಕಿಮ್ಮನೆ ಹೊಸ ಬಾಂಬ್ ಕಿಮ್ಮನೆ ಮಾತು ನಿಜವಾಗುತ್ತಾ?

ತೀರ್ಥಹಳ್ಳಿ ರಾಜಕೀಯದ ಬಗ್ಗೆ ಕಿಮ್ಮನೆ ಹೊಸ ಬಾಂಬ್ ಕಿಮ್ಮನೆ ಮಾತು ನಿಜವಾಗುತ್ತಾ?

by EDITOR NEWS WARRIORS

ಶಿವಮೊಗ್ಗ: ಜೆಡಿಎಸ್ ನಲ್ಲಿದ್ದ ಆರ್ ಎಮ್ ಮಂಜುನಾಥ್ ಗೌಡರು ಕಾಂಗ್ರೆಸ್ ಸೇರಿದ ನಂತರ ದಿನದಿಂದ ದಿನಕ್ಕೆ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥರ ಗೌಡರ ನಡುವೆ ವಾಕ್ಸಮರ ಗಳು ನಡೆಯುತ್ತಿದ್ದು.

ನಿನ್ನೆ ನಡೆದ ಕಾರ್ಯಕ್ರಮ ಒಂದರಲ್ಲಿ ಕಿಮ್ಮನೆ ರತ್ನಾಕರ್ ಹೊಸ ಬಾಂಬೊಂದನ್ನು ಸಿಡಿಸಿದ್ದಾರೆ:

ರಾಜಕೀಯದಲ್ಲಿ ಕೆಜೆಪಿ (ಕರ್ನಾಟಕ ಜನತಾ ಪಾರ್ಟಿ) ಮತ್ತೆ ಉದಯಿಸಲಿದೆ. ಜೆಡಿಎಸ್‌ ಆ ಪಕ್ಷದ ಜತೆ ಕೈಜೋಡಿಸಲಿದೆ ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೊಸ ಬಾಂಬ್‌ ಸಿಡಿಸಿದರು.

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಗುರುವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಅವರು ಮಾತನಾಡುತ್ತಾ.
ಸದ್ಯದಲ್ಲೇ ಕೆಜೆಪಿ ಪಕ್ಷ ಪುನರ್ ಸ್ಥಾಪನೆ ಆಗಲಿದ್ದು. ಜೆಡಿಎಸ್ ಸಹಯೋಗದಲ್ಲಿ ಸರ್ಕಾರ ರಚಿಸಲು ಎಲ್ಲಾ ಸಿದ್ಧತೆ ನಡೆದಿದೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಈಚೆಗೆ ಕಾಂಗ್ರೆಸ್‌ ಸೇರಿದ ರಾಜಕೀಯ ಅಲೆಮಾರಿಗಳು (ಅಪೆಕ್ಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಬಣ) ಕೆಜೆಪಿ ಸೇರಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿರುವ ಕಿಮ್ಮನೆ ಮುಂದುವರಿದು ಮಾತನಾಡುತ್ತಾ,

ಜೆಡಿಎಸ್ ಕಾಂಗ್ರೆಸ್ ಮುಖಂಡರುಗಳು ಒಂದೇ ಸಭೆಯಲ್ಲಿ ಕಿಮ್ಮನೆ ಆರೋಪ:

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾಂಗ್ರೆಸ್ ಮುಖಂಡರು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜೆಡಿಎಸ್ ಮುಖಂಡರು ಕಾಣಿಸಿಕೊಳ್ಳುತ್ತಿದ್ದಾರೆ. ಈಚೆಗೆ ನಡೆದ ಶರಾವತಿ ಮುಳುಗಡೆ ಸಂತ್ರಸ್ತರ ಪಾದಯಾತ್ರೆಯಲ್ಲಿ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‌ ಭಾಗಿಯಾಗಿದ್ದರು. ಬಿದರಗೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವೇಗೌಡರು, ಕುಮಾರಸ್ವಾಮಿ ಭಾವಚಿತ್ರ ಬಳಸಲಾಗಿತ್ತು. ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದ ಬೇರೆ ಪಕ್ಷದವರಿಗೆ ಮಣೆ ಹಾಕುವುದರ ಹಿಂದಿನ ಮರ್ಮವೇನು? ನಾನೂ ಸಭೆ ಆಯೋಜಿಸಿ, ಬೇರೆ ಪಕ್ಷದ ಮುಖಂಡರನ್ನು ಆಹ್ವಾನಸಿದರೆ ಸಹಿಸುವಿರಾ ಎಂದು ಪ್ರಶ್ನಿಸಿದರು.

ಕಿಮ್ಮನೆ ಮಾತಿಗೆ ಹಲವರು ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ಸಭೆಯಲ್ಲಿ ಪರಸ್ಪರ ಮಾತಿನ ಚಕಮಕಿ ನಡೆಯಿತು. ‘ಯಾರನ್ನೋ ಕರೆತಂದು ನನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ’ ಎನ್ನುತ್ತಾ ಕಿಮ್ಮನೆ ಮಧ್ಯದಲ್ಲೇ ಸಭೆಯಿಂದ ಸಿಟ್ಟಿನಿಂದ ಹೊರನಡೆದರು.

ವರದಿ ..ರಘುರಾಜ್ ಹೆಚ್. ಕೆ

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!